17 ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ. 18 ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.