5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ. 6 ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.
17 ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.