9 ಅದೇ ನಾಲಿಗೆಯಿಂದ ನಮ್ಮ ತಂದೆಯಾದ ಕರ್ತದೇವರನ್ನು ಕೊಂಡಾಡುತ್ತೇವೆ, ಅದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಸೃಷ್ಟಿಸಲಾದ ಮನುಷ್ಯರನ್ನು ನಾವು ಶಪಿಸುತ್ತೇವೆ. 10 ಅದೇ ಬಾಯಿಂದ ಸ್ತುತಿ ಮತ್ತು ಶಾಪ ಬರುತ್ತವೆ. ನನ್ನ ಪ್ರಿಯರೇ, ಇವುಗಳು ಹೀಗಿರಬಾರದು. 11 ಒಂದೇ ಬುಗ್ಗೆಯಿಂದ ಸಿಹಿನೀರನ್ನೂ ಉಪ್ಪುನೀರನ್ನೂ ಒಂದೇ ಸ್ಥಳದಿಂದ ಹೊರಡಿಸುವುದುಂಟೇ? 12 ನನ್ನ ಪ್ರಿಯರೇ, ಅಂಜೂರದ ಮರವು ಎಣ್ಣೇಮರದ ಕಾಯನ್ನು ಬಿಡುವುದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಉಪ್ಪುನೀರಿನ ಬುಗ್ಗೆಯು ಸಿಹಿನೀರನ್ನು ಕೊಡಲು ಎಂದಿಗೂ ಸಾಧ್ಯವಿಲ್ಲ.
Publicidade