15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ. 16 ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.